ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ಹೇಳಿ ವಂಚಿಸಿರುವುದಾಗಿ ಯುವತಿ ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದಾರೆ.
ಸಿಎಂಗೆ ಯುವತಿ ಪತ್ರ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಈ ರೀತಿ ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಾಗಿಲ್ಲ.
ತಮ್ಮ ವಿರುದ್ಧ ಕೇಳಿಬಂದ ಆರೋಪ ಅಲ್ಲಗಳೆದ ಸ್ನೇಹಲ್ ಅವರು, ಈ ರೀತಿ ಆರೋಪ ಮಾಡಿದ ಯುವತಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ನನ್ನ ವಿರುದ್ಧ ಈ ರೀತಿ ಆರೋಪ ಮಾಡಲು ಕಾರಣ ಗೊತ್ತಾಗಿಲ್ಲ. ಟ್ವಿಟರ್ ಗೆ ಕೂಡ ಮಾಹಿತಿ ನೀಡಲಾಗಿದೆ. ಮಾನಹಾನಿ ಪ್ರಕರಣ ದಾಖಲಿಸುವುದಾಗಿಯೂ ಅವರು ಹೇಳಿದ್ದಾರೆ.