
ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಆಯುಕ್ತ ಮನ್ಸೂರ್ ಅಲಿ ಸಿಕ್ಕಿಬಿದ್ದಿದ್ದಾರೆ.
ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಟಿಡಿಆರ್ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಆಯುಕ್ತರನ್ನು ವಶಕ್ಕೆ ಪಡೆಯಲಾಗಿದೆ. ಬ್ರೋಕರ್ ಸಲೀಂನನ್ನು ಕೂಡ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.