ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನೈಟ್ ಡ್ಯೂಟಿಗೆ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿ ಜಂಟಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಂತಹ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಸಲುವಾಗಿ, ಸಂಚಾರ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರತಿ ದಿನ ರಾತ್ರಿ ಕರ್ತವ್ಯಕ್ಕೆ ಇಬ್ಬರು ಮಹಿಳಾ ಹೆಚ್.ಸಿ./ಪಿ.ಸಿ. ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ.