alex Certify BIG NEWS: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿಗೆ ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಇದನ್ನು ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ ಕುರಿತಾಗಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವಿವಿಗಳಲ್ಲಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕ ನೀಡುತ್ತಿದ್ದು, ಈ ಪದ್ಧತಿಯನ್ನು ಇನ್ನಷ್ಟು ಸರಳೀಕರಣ ಮಾಡಲಾಗುವುದು. ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ರಚಿಸಲಾದ ಸಮಿತಿ ನೀಡುವ ಶಿಫಾರಸು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ವಿವಿ ಕುಲಪತಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಪಡೆಯಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...