ಬೆಂಗಳೂರು : ಅರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಣೆ ನಡೆಸಿ ನಂತರ ಗ್ರಾಮ ಮಟ್ಟದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒ ಸೇರಿದಂತೆ ಮತ್ತಿತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಹೇಳಿದರು.
ಸದನದ ಸದಸ್ಯರೆಲ್ಲರೂ ಸಹಕಾರ ಕೊಟ್ಟರೆ ಬಿಪಿಎಲ್ ಪಡೆದುಕೊಂಡ ಅನರ್ಹ ಫಲಾನುಭವಿಗಳ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ. . 99 ಎಪಿಎಲ್ ಕಾರ್ಡ್ ಗಳು ಬಿಪಿಎಲ್ ಸೇರ್ಪಡೆಯಾದರೆ ಯಾರೂ ಕೇಳುವುದಿಲ್ಲ. ಆದರೆ ಒಂದೇ ಒಂದು ಬಿಪಿಎಲ್ ಕಾರ್ಡ್ ಬಿಟ್ಟು ಹೋದರೆ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡುತ್ತಾರೆ ಎಂದು ಅವರು ಹೇಳಿದರು.