ಆಕಸ್ಮಿಕವಾಗಿ ಹುಲಿಯನ್ನು ಕಂಡರೆ ಮೊದಲು ಮಾಡುವ ಕೆಲಸ ಸ್ಥಳದಿಂದ ಓಟ ಕಿತ್ತು ತಮ್ಮನ್ನು ತಾವು ರಕ್ಷಿಸಿಕೊಳ್ಖುವುದಾಗಿದೆ. ಆದರೆ ಕಾಡಿನ ನಡುವೆ ಹುಲಿ ರಸ್ತೆ ದಾಟುತ್ತಿರುವುದನ್ನು ಗಮನಿಸಿದ ಪ್ರಯಾಣಿಕರ ಗುಂಪೊಂದು ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದೆ.
ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಂದಿನ ಪರಿಣಾಮಗಳ ಬಗ್ಗೆ ಯೋಚಿಸದೆ ಹುಲಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಅಲ್ಲಿದ್ದವರು ಪ್ರಯತ್ನಿಸಿದರು.
ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತ ನಂದಾ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ರಸ್ತೆಯ ಮಧ್ಯದಲ್ಲಿ ಯುವಕರ ಗುಂಪೊಂದು ರಸ್ತೆ ದಾಟಲು ಪ್ರಯತ್ನಿಸುತ್ತಿರುವ ಹುಲಿಯ ಫೋಟೋಗಳು ಮತ್ತು ವೀಡಿಯೊಗಳನ್ನು ಕ್ಲಿಕ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಅವರಲ್ಲಿ ಒಬ್ಬರು ಪ್ರಾಣಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದರು. ಆಗ ಹುಲಿ ಬಹಳ ಸಮೀಪದಲ್ಲಿತ್ತು.