alex Certify ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿ: ಇಲ್ಲಿದೆ ಮಾಹಿತಿ

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿ.12 ರಂದು ಬೆಳಗ್ಗೆ 9ಕ್ಕೆ ಪ್ರತಿಷ್ಟಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳು:

ಟೋಯೋಟಾ, ಜಿ-ಟೆಕ್ನೋ, ಜಿಂದಾಲ್, ಶಾತವಾಹನ ಇಸ್ಪಾತ್ ಲಿ, ಹ್ಯಾಲಿಸ್ ಬ್ಲೂ ಹಾಗೂ ಇನ್ನಿತರ ಕಂಪನಿಗಳು.

ವಿದ್ಯಾರ್ಹತೆ:

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನವಿರುತ್ತದೆ. 18 ರಿಂದ 26 ವರ್ಷ ವಯಸ್ಸಿನ ಅಭ್ಯರ್ಥಿಗಳು ಭಾಗವಹಿಸಬಹುದು. ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡನ ಪ್ರತಿ ಹಾಗೂ ಬಯೋಡೇಟಾ ತರಬೇಕು.

ವಿಶೇಷ ಸೂಚನೆ:

ಐಟಿಐ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರೂ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9741183501 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಗವಿಶಂಕರ್ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...