alex Certify ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾದವರ ನಾಲ್ವರು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಕಳೆದ ವರ್ಷ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮಹಮ್ಮದ್ ಫಾಝೀಲ್ ಹಾಗೂ ಡಿಸೆಂಬರ್ 24ರಂದು ಕಾಟಿಪಾಳ್ಯದ ಅಬ್ದುಲ್ ಜಲೀಲ್, 2018ರ ಜನವರಿ 3ರಂದು ಕಾಟಿಪಾಳ್ಯದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.

ಈ ನಾಲ್ವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಹಾಗೂ ಮುಸ್ಲಿಂ ಸಂಘಟನೆಗಳು ಒತ್ತಾಯಿಸಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...