alex Certify BIG NEWS : ಪ್ರವಾಹದಿಂದ ಹಾನಿಯಾದ ಮನೆಗಳ ‘ಪುನರ್ ನಿರ್ಮಾಣ’ಕ್ಕೆ 5 ಲಕ್ಷ ರೂ.ವರೆಗೆ ಪರಿಹಾರ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರವಾಹದಿಂದ ಹಾನಿಯಾದ ಮನೆಗಳ ‘ಪುನರ್ ನಿರ್ಮಾಣ’ಕ್ಕೆ 5 ಲಕ್ಷ ರೂ.ವರೆಗೆ ಪರಿಹಾರ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣಕ್ಕೆ 5 ಲಕ್ಷ ರೂ.ವರೆಗೆ  ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಉಪ ಕಾರ್ಯದರ್ಶಿ ಟಿಸಿ ಕಾಂತ್ ರಾಜ್ ಆದೇಶ ಹೊರಡಿಸಿದ್ದಾರೆ.2023ನೇ ಸಾಲಿನ ಮುಂಗಾರು ಋತುವಿನ (1ನೇ ಜೂನ್ ರಿಂದ 30ನೇ ಸಪ್ಟೆಂಬರ್ ವರೆಗೆ) ಅತಿವೃಷ್ಟಿ, ಪುವಾಹದಿಂದ ಮನೆಗಳು ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯಲ್ಲಿ ನಿಗಧಿಪಡಿಸಿರುವ ದರಕ್ಕಿಂತ ಈ ಕೆಳಕಂಡಂತೆ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

ಷರತ್ತುಗಳು:
1. 2023ನೇ ಸಾಲಿನ ಮುಂಗಾರುವಲ್ಲಿ (1ನೇ ಜೂನ್ ರಿಂದ 30 ಸಪ್ಟೆಂಬರ್ ವರೆಗೆ) ಅತೀವೃಷ್ಟಿ/ಪ್ರವಾಹದಿಂದ ಮನಹಾನಿ ಉಂಟಾದಲ್ಲಿ ಜಿಲ್ಲಾಧಿಕಾರಿಗಳು ಜಂಟಿ ತಂಡ ರಚಿಸಿ ತಂಡದವರಿಂದ ಸಂತ್ರಸ್ಥರ ವಿವರಗಳನ್ನು ಪಡೆದು ಜಿಲ್ಲಾಧಿಕಾರಿಗಳು ನಿಯಮಾನುಸಾರ ಎ, ಬಿ1, ಬಿ2 ಅಥವಾ ಸಿ ವರ್ಗಕ್ಕೆ ಸೀರಿಸುವ ಬಗ್ಗೆ ಅರ್ಹತೆಯನ್ನು ಪರಿಶೀಲಿಸಿ ಅನುಮೋದಿಸಿದ ಫಲಾನುಭವಿಗಳ ವಿವರಗಳನ್ನು RGHCL ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಿಸುವುದು.ಜಿಲ್ಲಾಧಿಕಾರಿಗಳು ಎ, ಬಿ1 ಮತ್ತು ಬಿ2 ವರ್ಗದ ಮನಗಳ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯನ್ವಯ ಮೊದಲನೇ ಕಂತು ರೂ. 1.20 ಲಕ್ಷಗಳನ್ನು ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.ಮುಂದಿನ ಕಂತುಗಳ ಅನುದಾನವನ್ನು ನಿಯಮಾನುಸಾರ ಪ್ರಗತಿಯನುಸಾರ RGHCL ಸಂಸ್ಥೆಯಿಂದ ಭರಿಸಲಾಗುವುದು.

ಜಿಲ್ಲಾಧಿಕಾರಿಗಳು ಸಿ ವರ್ಗದಲ್ಲಿ ಅರ್ಹರಿರುವ ಮನಹಾನಿ ಫಲಾನುಭವಿಗಳಿಗೆ ತಲಾ ರೂ. 50,000/- ರಂತ (SDRF ಮಾರ್ಗಸೂಚಿಯನ್ವಯ ರೂ. 6500/- ಸೇರಿದಂತೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ನಿಯಮಾನುಸಾರ ಅರ್ಹ ಫಲಾನುಭವಿಗಳ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡತಕ್ಕದ್ದು.

2. ನಿಯಮಾನುಸಾರ ಜಂಟಿ ಸ್ಥಳ ತನಿಖೆಯ ವರದಿ ಬಂದು ಜಿಲ್ಲಾಧಿಕಾರಿಗಳು ಅರ್ಹತೆ ಬಗ್ಗೆ ಪರಿಶೀಲಿಸಿದ 20 ದಿನದೊಳಗೆ ಪರಿಹಾರ ಪಾವತಿಸುವುದು.

3. ಮನೆಹಾನಿ ಪರಿಹಾರ ಪಾವತಿಯಾಗಿರುವ ಫಲಾನುಭವಿಗಳ ವಿವರವನ್ನು ಜಿಲ್ಲಾಧಿಕಾರಿಗಳು ಜಿಲ್ಲೆಯ ಅಧಿಕೃತ ಜಾಲತಾಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುವುದು. ಸದರಿ ಮಾಹಿತಿಯನ್ನು ತಾಲ್ಲೂಕು ಕಛೇರಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ಸಹ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುವುದು.

4. ಮನಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನು ಹಾಗೂ ಮಾಹಿತಿಯನ್ನು
ನಮೂದಿಸುವುದರಲ್ಲಿ ಏನಾದರೂ ಲೋಪದೋಷಗಳು ಉಂಟಾದಲ್ಲಿ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು.

5. ಸಂತ್ರಸ್ತರಿಗೆ ಪರಿಹಾರ ವಿತರಿಸಿಸುವ ಕುಟುಂಬವಾರು ವೆಚ್ಚದ ಲೆಕ್ಕಗಳನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ನಿರ್ವಹಿಸತಕ್ಕದ್ದು ಮತ್ತು ವೆಚ್ಚದ ಬಳಕೆ ಪುಮಾಣ ಪತ್ರವನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು  ಸರ್ಕಾರದ ಉಪ ಕಾರ್ಯದರ್ಶಿ  ಆದೇಶ ಹೊರಡಿಸಿದ್ದಾರೆ.

 

 

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...