
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ ಎಂದು ವಂಚನೆ ಪ್ರಕರಣದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ವಿಚಾರಣೆಯ ಬಳಿಕ ಅವರು ಮಾತನಾಡಿ, ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ. ಅವರ ಸಹೋದರ ಗೋಪಾಲ್ ಜೋಶಿ ಬಂಧನವಾಗಿದೆ. ನಮಗೆ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇತ್ತು. ಆದರೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ ಆಮಿಷವೊಡ್ಡಿದ್ದರು ಎಂದು ಹೇಳಿದ್ದಾರೆ.
ಪ್ರಹ್ಲಾದ್ ಜೋಶಿ, ಹೈಕಮಾಂಡ್ ನಾಯಕರನ್ನು ನಾನು ಭೇಟಿಯಾಗಿಲ್ಲ, ಗೋಪಾಲ್ ಜೋಶಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ. ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.