ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಎರಡು ವಿಚಾರವಾಗಿ ಬಿಜೆಪಿ ನಾಯಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ತೆರಳಿ ದೂರು ನೀಡಲಾಗಿದೆ.
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯವರು 50 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಸಿಎಂ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ದೂರು ನೀಡಿದೆ.
ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಬರುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ದೂರು ನೀಡಲಾಗಿದೆ.