ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಎಸ್. ಶಿವಶಂಕರ್ ಈ ಬಗ್ಗೆ ದೂರು ನೀಡಿದ್ದಾರೆ. ಆಗಸ್ಟ್ 8 ರಿಂದ 27ರ ನಡುವೆ ವಿಶೇಷ ಕರ್ತವ್ಯಾಧಿಕಾರಿಯ ಹೆಸರು ಮತ್ತು ಲೆಟರ್ ಹೆಡ್ ಬಳಸಿಕೊಂಡಿರುವ ಅಪರಿಚಿತರು ಮೈಸೂರಿನ ಕೆಸರೆ ಗ್ರಾಮದಲ್ಲಿರುವ 5 ಎಕರೆ 22 ಗುಂಟೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಅನುಮೋದಿಸುವಂತೆ ನಗರಾಭಿವೃದ್ಧಿ ಇಲಾಖೆ ಅಪಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹೀಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದ ಮೇರೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.