ಕೊಪ್ಪಳ: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸಸ್ಪೆಂಡ್ ಮಾಡಲಾಗಿದೆ. ಮಹಮ್ಮದ್ ಅಜರುದ್ದೀನ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆತನನ್ನು ಅಮಾನತು ಮಾಡಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿಕ್ಷಕ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಮಹಿಳೆಯೊಬ್ಬರು ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ. ಪುತ್ರಿಗೆ ಟ್ಯೂಷನ್ ಹೇಳಿ ಕೊಡುವ ಜೊತೆಗೆ ಸರ್ಕಾರಿ ಸೌಲಭ್ಯ ಕಲ್ಪಿಸುವುದಾಗಿ ಹೇಳಿ ಅವನ ಮನೆಗೆ ಕರೆಸಿಕೊಂಡು ಲೈಂಗಿಕ ಕ್ರಿಯೆಗೆ ಪದೇ ಪದೇ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ ವಿಡಿಯೋಗಳನ್ನು ಬಹಿರಂಗಪಡಿಸಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ.