ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ರಾಜ್ಯದ 4 ಕಡೆ ದೂರು ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಉಡುಪಿಯ ಕಾಪುವಿನಲ್ಲಿ ವುಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ದೂರು ನೀಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್ ದೂರು ನೀಡಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಅವಮಾನಿಸಿದ್ದಾರೆ. ಅವರನ್ನು ಬಂಧಿಸಬೇಕು ಎಂದು ದೂರು ನೀಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ಹನುಮ ಸಂಕೀರ್ತನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಖ್ ರದ್ದು ಮಾಡುವ ಮೂಲಕ ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಎಂದು ಹೇಳಿದ್ದರು.