ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು ಚಿಂತನೆ ನಡೆದಿದೆ.
ನಿಗಮ ಮಂಡಳಿಗಳ ಅಧ್ಯಕ್ಷರು ದೂರು ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಅವರ ಕಾಲು ಒತ್ತುವವರು, ತಲೆ ಹಿಡಿಯುವವರಿಗೆ ಮಣೆ ಹಾಕಲಾಗಿದೆ. ಅಂತಹವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ 20 ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ನಾಳೆ ದೂರು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.