alex Certify ರೇಷನ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಪಡಿತರ ಪದಾರ್ಥ, ಅವಶ್ಯಕ ವಸ್ತುಗಳ ಬಗ್ಗೆ ದೂರು ಸ್ವೀಕಾರಕ್ಕೆ ಕಂಟ್ರೋಲ್ ರೂಮ್ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಷನ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಪಡಿತರ ಪದಾರ್ಥ, ಅವಶ್ಯಕ ವಸ್ತುಗಳ ಬಗ್ಗೆ ದೂರು ಸ್ವೀಕಾರಕ್ಕೆ ಕಂಟ್ರೋಲ್ ರೂಮ್ ಸ್ಥಾಪನೆ

ಕಲಬುರಗಿ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪಡಿತರ ಪದಾರ್ಥಗಳು ಹಾಗೂ ಅವಶ್ಯಕ ವಸ್ತುಗಳ ವಿತರಣೆ ಕುರಿತು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ (24×7) ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ.

ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ,  ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯವರೆಗೆ ಹಾಗೂ  ರಾತ್ರಿ 10 ರಿಂದ ಬೆಳಗಿನ 6 ಗಂಟೆಯವರೆಗೆ ಕಂಟ್ರೋಲ್ ರೂಮ್‌ನಲ್ಲಿ ದಿನದ 24 ಗಂಟೆಯೂ ಪಾಳಿಯಂತೆ ಕಾರ್ಯನಿರ್ವಹಿಸಲು ಮೂರು ಜನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅದರಂತೆ ಈ ಕಂಟ್ರೋಲ್ ರೂಮ್‌ನ ಮೇಲುಸ್ತುವಾರಿ ನೋಡಿಕೊಳ್ಳಲು ಕಲಬುರಗಿ (ಪಡಿತರ) ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ರವಿ ಎಂ. ಬೆಹರೆ ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಈ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08472-278678 ಇದ್ದು, ಪಡಿತರ ಪದಾರ್ಥಗಳು, ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡಿಸೇಲ್, ಸೀಮೆಎಣ್ಣೆ ಹಾಗೂ ಸಾರ್ವಜನಿಕರಿಗೆ ಅವಶ್ಯಕವಾಗಿರುವ ಇನ್ನಿತರೆ ದಿನಬಳಕೆಯ ಅವಶ್ಯಕ ಆಹಾರ ವಸ್ತುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಈ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಆಹಾರ, ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ದಯಾನಂದ ಪಾಟೀಲ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...