ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.
ಐವರು ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್. ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಹರೀಶ್ ಪೂಂಜಾ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ನಕಲಿ ಆಡಿಯೋ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.