alex Certify ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕಂಪ್ಯೂಟರ್ ಪರೀಕ್ಷೆ ಪಾಸಾದವರಿಗೆ ವೇತನದ ಜತೆ 5000 ರೂ. ಪ್ರೋತ್ಸಾಹ ಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕಂಪ್ಯೂಟರ್ ಪರೀಕ್ಷೆ ಪಾಸಾದವರಿಗೆ ವೇತನದ ಜತೆ 5000 ರೂ. ಪ್ರೋತ್ಸಾಹ ಧನ

ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಾಸಾದ ಸರ್ಕಾರಿ ನೌಕರರಿಗೆ 5000 ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶಿಸಿದೆ.

2021 ರ ಏಪ್ರಿಲ್ 17 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾದ ಅರ್ಹ ಸೇವಾನಿರತ ಸರ್ಕಾರಿ ನೌಕರರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಇರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪ್ರಮಾಣ ಪರಿಶೀಲಿಸಿ ಪಾಸಾದ ದಿನಾಂಕ ಖಚಿತಪಡಿಸಿಕೊಂಡು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಿಗಳು ಪ್ರೋತ್ಸಾಹಧನ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ಪಡೆಯುವ ವೇತನದಲ್ಲಿ ಸೇರಿಸಿ ನೀಡಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...