![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು : ಪೊಲೀಸ್ ಕಾನ್ಸ್‌ಟೇಬಲ್ ರವರುಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ, ಪ್ರೋತ್ಸಾಹ ಧನ ಮಂಜೂರು ಮಾಡುವ ಹಾಗೂ ಮುಂಬಡ್ತಿ ನೀಡುವ ಕುರಿತು ಹಲವು ಘಟಕಾಧಿಕಾರಿಗಳು ಸ್ಪಷ್ಟಿಕರಣ ಕೋರುತ್ತಿರುವ ಬಗ್ಗೆ ಪರಿಶೀಲಿಸಿ ಈ ಕೆಳಕಂಡಂತೆ ಸ್ಪಷ್ಟಿಕರಣ ನೀಡಲಾಗಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 43 ಸೇವನೆ 2008, ದಿನಾಂಕ: 07.03.2012 ರಲ್ಲಿನ ನಿಯಮ 1 (3) ರಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಕಂಪ್ಯೂಟರ್ ಸಾಕ್ಷರತಾ ನಿಯಮವು ಅನ್ವಯವಾಗತಕ್ಕದ್ದಲ್ಲ ఎందు ತಿಳಿಸಿರುವುದರಿಂದ ಕಂಪ್ಯೂಟರ್ ಸಾಕ್ಷರತಾ ಕ್ಷರತಾ ಪರೀಕ್ಷೆಯು ರವರುಗಳ ಮುಂಬಡ್ತಿಗೆ ಕಡ್ಡಾಯವಾಗಿರುವುದಿಲ್ಲ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯು ಕಡ್ಡಾಯವಲ್ಲವಾದ್ದರಿಂದ ಸದರಿಯವರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ ಸಹ ಅವರಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ.
ಮುಂದುವರಿದಂತೆ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡದೆ ಇರುವ ಸಿಬ್ಬಂದಿಗಳನ್ನು ಮುಂಬಡ್ತಿ ಪರಿಗಣಿಸುವ ಕುರಿತು ಸರ್ಕಾರದಿಂದ ಸ್ಪಷ್ಟಿಕರಣ ಕೋರಲಾಗಿದ್ದು, ಸರ್ಕಾರದ ಪತ್ರ ಸಂಖ್ಯೆ: ಒಇ 79 ಪಿಹೆಚ್‌ಎಸ್ 2023, ದಿನಾಂಕ: 16.12.2023 ರಲ್ಲಿ ಸ್ಪಷ್ಟಿಕರಣ ನೀಡಲಾಗಿದೆ. ಸದರಿ ಸರ್ಕಾರದ ಪತ್ರವನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಇದರೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ.
![](https://kannadadunia.com/wp-content/uploads/2024/01/WhatsApp-Image-2024-01-06-at-8.54.56-PM.jpeg)