
ಬೆಂಗಳೂರು: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇ -ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. ನಾಗರಿಕರು ಊಹಾಪೋಹಗಳಿಗೆ ಕಿವಿಗೊಡದೆ, ಆತಂಕಗೊಳ್ಳದೆ ಇ-ಖಾತಾ ಮಾಡಿಸಿಕೊಳ್ಳಬಹುದು. ಮಧ್ಯವರ್ತಿಗಳ ಹಾವಳಿ, ನಕಲಿ ನೋಂದಣಿಗಳನ್ನು ತಡೆಯಲು, ಆಸ್ತಿ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.