ಬೆಂಗಳೂರು: ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು. ಬೊಮ್ಮಾಯಿ ಅವರು ಜೆಡಿಎಸ್ ಕಚೇರಿಗೆ ತೆರಳಿ, ಸುದ್ದಿಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ಧಮ್ಮು ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಿಪಕ್ಷಗಳ ವಿರುದ್ಧ ವ್ಯಂಗ್ಯವಾಡಿದೆ.
ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ ಎಂದು ಟೀಕಿಸಿದೆ.
ಕನ್ನಡಿಗರು ಭರವಸೆ ಇಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಬರಲಿದೆ. ಪದೇ ಪದೇ ಪ್ರಜಾಪ್ರಭುತ್ವದ ಆಶಯಗಳ ವಿರುದ್ಧ ಕೆಲಸ ಮಾಡುವ ಬಿಜೆಪಿ ಈಗಲಾದರೂ ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ ಎಂದು ಕಾಂಗ್ರೆಸ್ ಗುಡುಗಿದೆ.
ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು,
ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು.
ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ…
— Karnataka Congress (@INCKarnataka) July 25, 2023