ಬೆಂಗಳೂರು: ಕಾಂಗ್ರೆಸ್ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಚುನಾವಣೆ ಆಯೋಗ ನೋಟಿಸ್ ಜಾರಿಗೊಳಿಸಿದ್ದು, ಮಂಗಳವಾರ ರಾತ್ರಿ 8 ಗಂಟೆ ಒಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದ್ದು, ಕಾಂಗ್ರೆಸ್ ವಿರುದ್ಧ ನೀಡಿದ ಜಾಹೀರಾತುಗಳಿಗೆ ಸ್ಪಷ್ಟನೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ಈ ಕುರಿತಾಗಿ ದೂರ ನೀಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂದು ಬಿಜೆಪಿಯಿಂದ ಪತ್ರಿಕೆಗಳಲ್ಲಿ ಜಾಹಿರಾತು ನೀಡಲಾಗಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ನಿಟ್ಟಿನಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.