ಮಂಗಳೂರು: ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೇವೆ. ಮೀನುಗಾರರ ಕುಟುಂಬಕ್ಕೆ ಬಡ್ಡಿ ರಹಿತವಾಗಿ 10 ಲಕ್ಷ ರೂಪಾಯಿ ಸಾಲ ಕೊಡುತ್ತೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಘೋಷಣೆ ಮಾಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಉದ್ಯೋಗ, ಬಂಡವಾಳ ಹೂಡಿಕೆ, ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುವುದು. ಭಾವೈಕ್ಯತೆಯಿಂದ ಕೂಡಿ ಬಾಳುವ ಸಮಾಜ ನಿರ್ಮಿಸುತ್ತೇವೆ ಎಂದು ಹೇಳಿದ್ದಾರೆ.