ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಲಿದೆ. ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ನೂರಾರು ಬೆಂಬಲಿಗರೊಂದಿಗೆ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರಲಿದ್ದಾರೆ.
ಬಿಜೆಪಿ –ಜೆಡಿಎಸ್ ಮೈತ್ರಿ ಬಗ್ಗೆ ಗೌರಿಶಂಕರ್ ಆಕ್ಷೇಪಿಸಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಅವರು ಇಂದು ಕಾಂಗ್ರೆಸ್ ಸೇರಲಿದ್ದಾರೆ.