alex Certify ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿ, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದೆ. ಚಡಚಣ ಪಟ್ಟಣ ಪಂಚಾಯಿತಿಯ 16 ಸ್ಥಾನಗಳಲ್ಲಿ ಬಿಜೆಪಿ 8, ಕಾಂಗ್ರೆಸ್ 4, ಪಕ್ಷೇತರರು 4 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ. ಸೋಮೇಶ್ವರ ಪುರಸಭೆಯ 23 ವಾರ್ಡ್ ಗಳಲ್ಲಿ ಬಿಜೆಪಿ 16, ಕಾಂಗ್ರೆಸ್ 7 ಸ್ಥಾನ ಪಡೆದುಕೊಂಡಿವೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ವಶವಾಗಿದೆ. 16 ಸ್ಥಾನಗಳಲ್ಲಿ ಕಾಂಗ್ರೆಸ್ 14, ಬಿಜೆಪಿ 2 ವಾರ್ಡ್ ಗಳಲ್ಲಿ ಜಯಗಳಿಸಿದೆ.

19 ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ 32 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ 24, ಬಿಜೆಪಿ 5, ಜೆಡಿಎಸ್ 4, ಪಕ್ಷೇತರರು 2 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...