alex Certify ಅಧಿಕಾರಕ್ಕೆ ಬರುವ ಬಗ್ಗೆ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಅಶೋಕ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಕ್ಕೆ ಬರುವ ಬಗ್ಗೆ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್, ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನವರು ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಗಳು ಪ್ರತಿ ತಿಂಗಳು 1000 ರೂ.ಗಳನ್ನು ಯಜಮಾನಿ ಖಾತೆಗೆ ಹಾಕುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಗ್ಯಾರಂಟಿ ಯಾರಿಗೆ ಇದೆ? ಆ ಪಕ್ಷ ಅಧಿಕಾರಕ್ಕೆ ಬರುವ ಗ್ಯಾರಂಟಿಯೇ ಇಲ್ಲ. ಈ ಬಾರಿ ಮತ ಹಾಕಿ ದೇವರಾಣೆಗೂ ಭರವಸೆ ಜಾರಿ ಮಾಡುತ್ತೇವೆ ಎನ್ನುತ್ತಾರೆ. 50 ವರ್ಷ ಅಧಿಕಾರ ಕೊಟ್ಟಾಗ ಯೋಜನೆ ಏಕೆ ಜಾರಿ ಮಾಡಲಿಲ್ಲ? ಬಂದು ಚೆನ್ನಾಗಿ ಊಟ ಮಾಡಿ ಹೋಗೋಕೆ ನಾವು ನೆಂಟರಲ್ಲ, ಈ ಮನೆಯ ಮಕ್ಕಳು ಎಂದು ಅಶೋಕ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...