ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದು, ಓರ್ವ ಕಾರ್ಯಕರ್ತನಿಗೆ ಗಾಯವಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಜಯಪುರ ಮತ್ತು ಕೊಪ್ಪ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.