
ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ರಾಜಕೀಯ ವಿಚಾರಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ನಮ್ಮ ಹೈಕಮಾಂಡ್ ಕಲಬುರಗಿಯಲ್ಲಿಯೇ ಇದ್ದು, ಏನೇ ಮಾಹಿತಿ ಇದ್ದರೂ ಅವರನ್ನೇ ಕೇಳಿ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅನೇಕ ಚರ್ಚೆ, ಗೊಂದಲ ನಡೆಯುತ್ತಿದೆ. ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಸೇರಿದಂತೆ ಯಾವುದೇ ರಾಜಕೀಯ ಬದಲಾವಣೆ ಬಗ್ಗೆ ಹೈಕಮಾಂಡ್ ಮತ್ತು ಪಕ್ಷದಿಂದ ನೇಮಕವಾದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.