alex Certify BREAKING : ಜುಲೈ 19 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜುಲೈ 19 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 19 ರಂದು ಕಾಂಗ್ರೆಸ್ ( Congress)  ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸಂಜೆ 6 :30 ಕ್ಕೆ  ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ . ಸಚಿವರು, ಶಾಸಕರು ಹಾಜರಿರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ವಿಧಾನಸಭಾ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ

ಬೆಂಗಳೂರು : ಹಲವು ಮಹತ್ವದ ಚರ್ಚೆ, ಪ್ರಶ್ನೋತ್ತರ ಅವಧಿಯ ಬಳಿಕ ವಿಧಾನಸಭಾ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಸ್ಪೀಕರ್ ಯು.ಟಿ ಖಾದರ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

ವಿಧಾನಸಭೆಯಲ್ಲಿ ಇಂದು ‘ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದೆ.ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ’ ವಿಧೇಯಕ ಅಂಗೀಕಾರವಾಗಿದ್ದು, ಈ ವಿಧೇಯಕಅಡಿ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯ್ತಿಗೆ ಅವಕಾಶ ನೀಡಲಾಗಿದೆ.ಈ ಮೂಲಕ 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.

ಬಿಜೆಪಿ ಅವನತಿ ಕರ್ನಾಟಕದಿಂದ ಶುರುವಾಗಿದೆ : ಸಿಎಂ ಸಿದ್ದರಾಮಯ್ಯ

ಬಿಜೆಪಿ ಅವನತಿ ಕರ್ನಾಟಕದಿಂದ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಆದರೆ ಮೋದಿ ಅವರು ರೋಡ್ ಶೋ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಹಾಗೂ ಸುತ್ತ ಮುತ್ತಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಮತಗಳಿಂದ ಗೆಲುವು ಸಾಧಿಸಿತು. ಪ್ರಧಾನಿ ಮೋದಿ ಪ್ರಭಾವ ಮಂಕಾಗುತ್ತಿದೆ ಎಂಬುದಕ್ಕೆ ಇದೆಲ್ಲ ಉದಾಹರಣೆ. ಹಾಗಾಗಿ ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ಸಲಹೆ ನೀಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...