ಬೆಂಗಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದ್ದು, ಜ.21 ರಂದು ಮಂಗಳೂರಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ.
ಹೌದು, ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರನ್ನು ಕರೆದುಕೊಂಡು ಬಂದು ಬೃಹತ್ ಸಮಾವೇಶ ಆಯೋಜನೆ ಮಾಡಲು ಸಿದ್ದತೆ ನಡೆಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ 5 ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಪ್ರಚಾರ ನಡೆಸಲಿದೆ. ರಾಜ್ಯ ಮಟ್ಟದ ಸಮಾವೇಶದಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ ಎಂದಿ ತಿಳಿದು ಬಂದಿದೆ.