ಬೆಂಗಳೂರು: ಅಬಕಾರಿ ಇನ್ಸ್ ಪೆಕ್ಟರ್ ಬಿ.ಎಂ. ಸುನಿಲ್ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಸ್ವೀಕರಿಸಿದ್ದರು.
ಅವರು ಬಿ ಫಾರಂ ಸ್ವೀಕರಿಸಿದ ವಿಡಿಯೋ ವೈರಲ್ ಆಗಿತ್ತು. ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕೂಡ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.