alex Certify 100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಇಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ದೊಡ್ಡಬಳ್ಳಾಪುರದ ಖಾಸಗಿ ರೆಸಾರ್ಟ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಪೈಪೋಟಿ ಇಲ್ಲದ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. 100 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ ನಡೆಯಲಿದೆ.

ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆಕಾಂಕ್ಷಿಗಳ ಮನವೊಲಿಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ನಾಯಕರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಎರಡನೇ ಪಟ್ಟಿ ಪ್ರಕಟ ವಿಳಂಬವಾದರೆ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗಿ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡನೇ ಪಟ್ಟಿಯನ್ನು ಕೂಡ ಶೀಘ್ರವೇ ಬಿಡುಗಡೆ ಮಾಡಲು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...