
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಎಐಸಿಸಿಯಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಡಾ. ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, ಡಾ.ಕೆ. ಗೋವಿಂದರಾಜು, ವಸಂತಕುಮಾರ್. ಜಗದೇವ ಗುತ್ತೇದಾರ, ಐವಾನ್ ಡಿಸೋಜ, ತಮಟಗಾರ ಹೆಸರು ಬಹುತೇಕ ಫೈನಲ್ ಆಗಿದ್ದು, ಶೀಘ್ರವೇ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.