ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧರಿಸುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಮತ್ತು ಎಐಸಿಸಿ ನಡುವೆ ಸಮಿತಿ ಇದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಎಐಸಿಸಿಗೆ ಶಿಫಾರಸು ಮಾಡುತ್ತಾರೆ. ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದರು.
ಪಕ್ಷದಲ್ಲಿ ನಾನೇ ಎಲ್ಲ ಎಂದು ಹೇಳಿಕೊಳ್ಳುವ ಬದಲು ಹೈಕಮಾಂಡ್ ಕಡೆ ಡಿ.ಕೆ. ಶಿವಕುಮಾರ್ ಬೆರಳು ತೋರಿಸುತ್ತಿದ್ದಾರೆ. ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.