
ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಎತ್ತಿದ್ದು ಜೊತೆಗೆ, ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಯಾವಾಗ ‘ಚೀನಾ ಪೇ ಚರ್ಚಾ’ ನಡೆಯಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೆ ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡಾ, ಕಾಂಗ್ರೆಸ್ ಕೇಳಿರುವ ಏಳು ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಉತ್ತರಿಸುವುದು ಕರ್ತವ್ಯವಾಗಿದೆ. ಅಲ್ಲದೆ ಸಂಸತ್ತಿನಲ್ಲಿ ಚರ್ಚಿಸಲು ಏಕೆ ನಿರ್ಬಂಧಿಸಲಾಗುತ್ತಿದೆ ಎಂಬುದರ ಕುರಿತು ದೇಶದ ಜನತೆಗೆ ಸ್ಪಷ್ಟಪಡಿಸಬೇಕಿದೆ ಎಂದಿದ್ದಾರೆ.