alex Certify ‘ಚೀನಾ ಪೇ ಚರ್ಚಾ’ ಯಾವಾಗ ಮಾಡುತ್ತೀರಿ ಮೋದಿಯವರೇ ? ಪ್ರಧಾನಿಗೆ ಖರ್ಗೆ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚೀನಾ ಪೇ ಚರ್ಚಾ’ ಯಾವಾಗ ಮಾಡುತ್ತೀರಿ ಮೋದಿಯವರೇ ? ಪ್ರಧಾನಿಗೆ ಖರ್ಗೆ ಪ್ರಶ್ನೆ

ಡೋಕ್ಲಾಮ್ನಲ್ಲಿರುವ ಸಿಲಿಗುರಿ ಕಾರಿಡಾರ್ ಸಮೀಪ ಜಂಫೇರಿ ಪರ್ವತದವರೆಗೆ ಚೀನಾದ ಸೇನಾ ಪಡೆಗಳು ತಮ್ಮ ನೆಲೆ ನಿರ್ಮಿಸುತ್ತಿವೆ ಎಂಬ ವಿಷಯ ಈಗ ಆಡಳಿತ ಹಾಗೂ ವಿರೋಧ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿರುವ ಮಧ್ಯೆ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ ಎಂದು ಆರೋಪಿಸಿದ್ದರು.

ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಎತ್ತಿದ್ದು ಜೊತೆಗೆ, ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಯಾವಾಗ ‘ಚೀನಾ ಪೇ ಚರ್ಚಾ’ ನಡೆಯಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಅಲ್ಲದೆ ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡಾ, ಕಾಂಗ್ರೆಸ್ ಕೇಳಿರುವ ಏಳು ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಉತ್ತರಿಸುವುದು ಕರ್ತವ್ಯವಾಗಿದೆ. ಅಲ್ಲದೆ ಸಂಸತ್ತಿನಲ್ಲಿ ಚರ್ಚಿಸಲು ಏಕೆ ನಿರ್ಬಂಧಿಸಲಾಗುತ್ತಿದೆ ಎಂಬುದರ ಕುರಿತು ದೇಶದ ಜನತೆಗೆ ಸ್ಪಷ್ಟಪಡಿಸಬೇಕಿದೆ ಎಂದಿದ್ದಾರೆ.

— Mallikarjun Kharge (@kharge) December 17, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...