ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿಯಲಿದ್ದಾರೆ. ಈ ಹಿಂದೆ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನವಿದ್ದರೂ, ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ನಾಯಕರು ದೂರ ಉಳಿದಿದ್ದರು. ಇದೀಗ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗುವುದನ್ನು ಖಚಿತಪಡಿಸಿದ್ದಾರೆ.