ಬೆಂಗಳೂರು: ಮಾರ್ಚ್ 4ರಂದು ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಮಾಚ್ 4ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದರೆ ಸಭೆ ಮುಂದೂಡಿಕೆಯಾಗಿದೆ. ನಾಳೆ ನಿಗದಿಯಾಗಿದ್ದ ಸಭೆಯನ್ನು ಮಾರ್ಚ್ 10ರಂದು ಸಂಜೆ 6 ಗಂಟೆಗೆ ನಿಗದಿಪಡಿಸಲಾಗಿದೆ.
ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.