ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಹಾಗೂ 100 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದರು.
ಮಧ್ಯಪ್ರದೇಶದ ಬುಂದೇಲ್ಖಂಡ್ ಪ್ರದೇಶದ ಸಾಗರ್ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಹಾಗೂ 100 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಮಹಿಳೆಯರಿಗೆ ಮಾಸಿಕ 1500 ರೂಪಾಯಿ ನೀಡಲಾಗುತ್ತದೆ, 500 ರೂಗೆ ಸಿಲಿಂಡರ್ ಗ್ಯಾಸ್ ನೀಡುತ್ತೇವೆ ಎಂದು ಘೋಷಣೆ ಮಾಡಿದರು ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕೇಂದ್ರ ಸರ್ಕಾರ ಏನೂ ಮಾಡಿಲ್ಲ ಎಂದರು. ಈ ವರ್ಷಾಂತ್ಯದಲ್ಲಿ ಮಧ್ಯ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಕಾಂಗ್ರೆಸ್ ಈಗಾಗಲೇ ಭರ್ಜರಿ ಸಿದ್ದತೆ ನಡೆಸುತ್ತಿದೆ.