ನವದೆಹಲಿ: ಸರ್ಕಾರದ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಗೆ ತಡೆ ನೀಡಲು ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.
ಚುನಾವಣೆಗೆ ಮೊದಲು 20,000 ಕೋಟಿ ರೂಪಾಯಿ ಟೆಂಡರ್ ಕರೆಯಲಾಗಿದೆ ಎಂದು ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ನೇತೃತ್ವದಲ್ಲಿ ಆಯೋಗಕ್ಕೆ ದೂರು ನೀಡಲಾಗಿದೆ.
ಆಯೋಗಕ್ಕೆ ದೂರು ನೀಡಿದ ನಂತರ ಮಾತನಾಡಿದ ಸಂಸದ ನಾಸೀರ್ ಹುಸೇನ್, ಈ ಟೆಂಡರ್ ಮೂಲಕ ಗುತ್ತಿಗೆದಾರರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಇದೇ ಹಣವನ್ನು ಚುನಾವಣೆಗೆ ಬಳಸಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ. ಕೂಡಲೇ ಟೆಂಡರ್ ಗೆ ತಡೆ ನೀಡುವಂತೆ ಆಯೋಗಕ್ಕೆ ಮನವಿ ಮಾಡಿದ್ದೇವೆ. 6 -7 ವರ್ಷದಿಂದ ಒಂದೇ ಕಡೆ ಇರುವ ಅಧಿಕಾರಿಗಳ ವರ್ಗಾವಣೆಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.