ಬೆಂಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ಬಿಜೆಪಿ ನಡೆಸುತ್ತಿರುವ ‘ನಾನೂ ಕರಸೇವಕ ನನ್ನನ್ನು ಬಂಧಿಸಿ’ ಅಭಿಯಾನಕ್ಕೆ ಕಾಂಗ್ರೆಸ್ ಕೌಂಟರ್ ನೀಡಿ,ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದೆ.
ಪ್ರತಾಪ್ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ. ಈಶ್ವರಪ್ಪ ಅವರೇ ನೀವು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ! ಎಂದು ಕೌಂಟರ್ ನೀಡಿದೆ.
ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನೀಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? ಎಂದು ಕಾಂಗ್ರೆಸ್ ಕೌಂಟರ್ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ. ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.