ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದೋಸ್ತಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್ ನೀಡಿದ್ದು, ಜನಾಂದೋಲನ ಕಾರ್ಯಕ್ರಮ ನಡೆಸಿದೆ.
ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಮದ್ದೂರಿನಲ್ಲಿ ಜನಾಂದೋಲನ ಕೇಂದ್ರ ಬಿಜೆಪಿಯ ಷಡ್ಯಂತ್ರ ಹಾಗೂ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಮದ್ದೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡ್ತಿದ್ದಾರೆ. ಅವರು ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧಕ್ಕೆ ಭೇಟಿ ನೀಡಬೇಕೆಂದು ಕೋರುತ್ತೇನೆ ಎಂದರು.
ಕಾಂಗ್ರೆಸ್ ಒಂದು ಸಂಘಟನೆಯಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಎಂತಹ ಮಹತ್ವದ ಪಾತ್ರ ವಹಿಸಿತು ಎಂಬುದು ಅರ್ಥವಾಗುತ್ತದೆ. ಆ ರಕ್ತಸಿಕ್ತ ಹೋರಾಟದ ಕತೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಮಡಿದಿದ್ದಾರೆ. ಆಗಸ್ಟ್ 9ರಂದು ಕ್ವಿಟ್ ಇಂಡಿಯಾ ಚಳುವಳಿ ದಿನ ಇದೆ. ಅದೇ ದಿನ ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ.
ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಅಧಿಕಾರಕ್ಕೆ ಬಂದಿದ್ದು ನಾವಲ್ಲ, ಈ ನಾಡಿನ ಜನತೆಯ ಕೈಗೆ ಅಧಿಕಾರ ಸಿಕ್ಕಿತು. ಬಡವರಿಗಾಗಿ ನಾವು ಅನೇಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು ಆದರೆ ಬಿಜೆಪಿಯವರು ಅವೆಲ್ಲವನ್ನೂ ನಿಲ್ಲಿಸುವ ಹುನ್ನಾರ ನಡೆಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಕೇಂದ್ರ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಹಾಗೂ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಮದ್ದೂರಿನಲ್ಲಿ ಇಂದು ಹಮ್ಮಿಕೊಂಡಿರುವ ಜನಾಂದೋಲನ ಕಾರ್ಯಕ್ರಮಕ್ಕೂ ಮುನ್ನ ಡಿಸಿಎಂ ಡಿಕೆಶಿ ಬೈಕ್ ಜಾಥಾದಲ್ಲಿ ಪಾಲ್ಗೊಂಡರು.