alex Certify BIG NEWS: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮಹತ್ವದ ಸಭೆ

ನವದೆಹಲಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸಿಡಬ್ಲ್ಯುಸಿ ಸಭೆ ನಡೆಯಲಿದೆ. ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಕಾಲಿಕ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ.

ರಾಜ್ಯ ಘಟಕಗಳ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸೋನಿಯಾಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿ -23 ನಾಯಕರ ಮನವಿ ಮೇರೆಗೆ ಸಿಡಬ್ಲ್ಯುಸಿ ಸಭೆ ನಡೆಸಲಾಗುವುದು. ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ಸಿಗರು ಪಕ್ಷ ತೊರೆಯುತ್ತಿರುವ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಗುತ್ತದೆ. ಇದರೊಂದಿಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಕುರಿತು ಚರ್ಚೆ ನಡೆಯಲಿದೆ.

ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗುವುದು. ಚುನಾವಣೆ ಮೂಲಕ ಎಐಸಿಸಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಮತ್ತೊಮ್ಮೆ ಅಧ್ಯಕ್ಷರಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...