ನವದೆಹಲಿ: ಭಾರತೀಯ ಸಶಸ್ತ್ರ ಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗಳಿಂದ ಕಾಂಗ್ರೆಸ್ ಸೋಮವಾರ ಅಂತರ ಕಾಯ್ದುಕೊಂಡಿದೆ.
ಹಿರಿಯ ನಾಯಕ ದಿಗ್ವಿಜಯ ಸಿಂಗ್ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವರದೇ ಆದವು. ಕಾಂಗ್ರೆಸ್ ಅವರ ಹೇಳಿಕೆ ಪ್ರತಿಬಿಂಬಿಸುವುದಿಲ್ಲ. ಯುಪಿಎ ಸರ್ಕಾರವು 2014 ರ ಮೊದಲು ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿತು. ರಾಷ್ಟ್ರೀಯ ಹಿತಾಸಕ್ತಿಯ ಎಲ್ಲಾ ಮಿಲಿಟರಿ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ ಮತ್ತು ಬೆಂಬಲಿಸುತ್ತದೆ ಎಂದು ಎಐಸಿಸಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ದಿಗ್ವಿಜಯ ಸಿಂಗ್ ಅವರು ವಾಗ್ದಾಳಿ ನಡೆಸಿದ್ದು, ಹಲವಾರು ಭಯೋತ್ಪಾದಕರನ್ನು ಕೊಂದಿರುವುದಾಗಿ ಹೇಳುತ್ತಿರುವಾಗ ಸರ್ಜಿಕಲ್ ಸ್ಟ್ರೈಕ್ ಗಳ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ ಏಕೆ? ನರೇಂದ್ರ ಮೋದಿ ಸರಕಾರ ಸುಳ್ಳಿನ ಕಂತೆಯಲ್ಲಿ ದೇಶವನ್ನು ಆಳುತ್ತಿದೆ ಎಂದು ಆರೋಪಿಸಿದ್ದರು.