ಕಲಬುರಗಿ : ಇಂದು ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1ನೌಕೆ ಉಡಾವಣೆಯಾಗುತ್ತಿದ್ದು, ಇಸ್ರೋ ಮತ್ತೊಂದು ಮಹತ್ವದ ಐತಿಹಾಸಿಕ ಸಾಧನೆಗೆ ಸಜ್ಜಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ‘ಇಸ್ರೋ’ ಸಂಸ್ಥೆಗೆ ಜಾಗ ನೀಡಿದ್ದು, ನಮ್ಮ ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಬಹಳ ನಂಬಿಕೆ ಇಟ್ಟುಕೊಂಡಿದೆ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.
ಚಂದ್ರಯಾನ -3 ರ ಯಶಸ್ಸಿನ ನಂತರ, ಭಾರತವು ಸೂರ್ಯ ಮಿಷನ್ ಆದಿತ್ಯ -ಎಲ್ 1 ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಚಂದ್ರನ ಮೇಲೆ ಇಳಿದ ಕೆಲವು ದಿನಗಳ ನಂತರ, ಭಾರತವು ತನ್ನ ಮೊದಲ ಸೌರ ಮಿಷನ್ ಅನ್ನು ಇಂದು ಅಂದರೆ ಶನಿವಾರ ಪ್ರಾರಂಭಿಸಲಿದೆ.