ಬೆಂಗಳೂರು : ಸಂವಿಧಾನ ಬಾಹಿರವಾಗಿ ಕಾಂಗ್ರೆಸ್ ಸರ್ಕಾರ ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.
ಸಂವಿಧಾನ ಬಾಹಿರವಾಗಿ ಕಾಂಗ್ರೆಸ್ ಸರ್ಕಾರ ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿದೆ. ಕಾಂಗ್ರೆಸ್ ಸರ್ಕಾರ ಹಿಂದುಳಿದ ಕಾಯಕ ಸಮುದಾಯಗಳನ್ನು ನಿರ್ಲಕ್ಷಿಸಿದೆ. ಅಹಿಂದ ಹೆಸರಿನಲ್ಲಿಅಧಿಕಾರಕ್ಕೆ ಬಂದ ಈ ಸರ್ಕಾರ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಓಲೈಸಲು ವಿಶೇಷ ಅನುದಾನ, ಮೀಸಲಾತಿ ನೀಡಿ, ಹಿಂದೂಗಳನ್ನು ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸರ್ಕಾರಕ್ಕೂ ಕಾನೂನು ಸುವ್ಯವಸ್ಥೆಗೂ ಸಂಬಂಧವೇ ಇಲ್ಲದಂತಾಗಿದೆ. ಗೃಹ ಸಚಿವರು ಇದ್ದೂ ಇಲ್ಲದಂತಾಗಿ, ಗೃಹ ಸಚಿವಾಲಯವನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿರ್ವಹಿಸುತ್ತಿದ್ದಾರೆ. ಪಾಕಿಸ್ಥಾನಕ್ಕೆ ಜಿಂದಾಬಾದ್ ಎಂದರೂ, ಕನ್ನಡಿಗರಿಗೆ ಅವಹೇಳನ ಮಾಡಿದರೂ ಈ ಸರ್ಕಾರ ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರ್ ಅಶೋಕ್ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸರ್ಕಾರಕ್ಕೂ ಕಾನೂನು ಸುವ್ಯವಸ್ಥೆಗೂ ಸಂಬಂಧವೇ ಇಲ್ಲದಂತಾಗಿದೆ. ಗೃಹ ಸಚಿವರು ಇದ್ದೂ ಇಲ್ಲದಂತಾಗಿ, ಗೃಹ ಸಚಿವಾಲಯವನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿರ್ವಹಿಸುತ್ತಿದ್ದಾರೆ.
ಪಾಕಿಸ್ಥಾನಕ್ಕೆ ಜಿಂದಾಬಾದ್ ಎಂದರೂ, ಕನ್ನಡಿಗರಿಗೆ ಅವಹೇಳನ ಮಾಡಿದರೂ ಈ ಸರ್ಕಾರ ಏನೂ ಕ್ರಮಕೈಗೊಳ್ಳುತ್ತಿಲ್ಲ.
– ಶ್ರೀ @RAshokaBJP,… pic.twitter.com/yrqfhaDJCz
— BJP Karnataka (@BJP4Karnataka) March 18, 2025