alex Certify ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

ಆಸ್ತಿ ನೋಂದಣಿ ಶುಲ್ಕ 600%, ಪ್ರಾಪರ್ಟಿ ಗೈಡೆನ್ಸ್ ವ್ಯಾಲ್ಯೂ 30%, ವಾಹನ ನೋಂದಣಿ ಶುಲ್ಕ 10%, ಆಸ್ಪತ್ರೆಗಳ ಸೇವಾ ದರ 5%, ವಿದ್ಯುತ್ ದರ 14.5%, ಹಾಲಿನ ದರ 15%, ಬಸ್ ದರ 15% ಏರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಲೋಕೋಪಯೋಗಿ, ನೀರಾವರಿ, ಸಾರಿಗೆ ಇಲಾಖೆ ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ತಮ್ಮ ವಿದ್ಯುತ್ ಬಿಲ್ ಪಾವತಿಸಲೂ ಸಾಧ್ಯವಾಗುತ್ತಿಲ್ಲ. ರಾಜ್ಯದ ಈ ಸ್ಥಿತಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

ಚುನಾವಣೆಗೂ ಮೊದಲು ಅವೈಜ್ಞಾನಿಕವಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದ @INCKarnataka ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದು, ಬಳಿಕ ಕಂಡಿಷನ್ ಅಪ್ಲೈ ಎಂಬ ನಿಯಮದಡಿ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಈಗ ಆ ಗ್ಯಾರಂಟಿಗಳು ಸಹ ಹಣಕಾಸಿನ ಕೊರತೆಯಿಂದ ನಿಂತಿದೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನೀಡಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು @INCKarnataka  ಶಾಸಕರೇ ಹೇಳುತ್ತಿದ್ದರು. ಈಗ ರಾಜ್ಯ ಸರ್ಕಾರದ ಖಜಾನೆ ಸಹ ಖಾಲಿಯಾಗಿ ನಾಲ್ಕೈದು ತಿಂಗಳಿನಿಂದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಯಾಗಿಲ್ಲ. ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ. ಅಭಿವೃದ್ಧಿ ಬಿಡಿ, ಸರ್ಕಾರ ನಡೆಸಲು, ಇಲಾಖೆಯ ಸಿಬ್ಬಂದಿಗಳ ವೇತನಗಳನ್ನು ಪಾವತಿಸಲು@siddaramaiah ಸರ್ಕಾರದ ಬಳಿ ದುಡ್ಡಿಲ್ಲ. ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...