
ಚನ್ನಪಟ್ಟಣ : ಸಂಕ್ರಾಂತಿ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಲ್ಲಿ ಅಸಮಾಧನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಸರ್ಕಾರ ಇರೋದು ಅನುಮಾನ ಎಂದು ಹೇಳಿದ್ದಾರೆ.
2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ನಲ್ಲಿ ಆಂತರಿಕ ಅಸಮಾಧಾನ ಸ್ಪೋಟಿಸಲಿದ್ದು, ಸರ್ಕಾರ ಪತನಗೊಳ್ಳಲಿದೆ ಎಂದು ಅನಿಸುತ್ತಿದೆ ಎಂದರು.