
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಗ್ಯಾರಂಟಿ ಗಳನ್ನು ನೀಡಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಕೋಡ್ತೀವಿ ಅಂತಾ ಹೇಳಿ ಜನರ ಮೂಗಿಗೆ ತುಪ್ಪ ಸವರಿದೆ. ಉಚಿತ ಕೊಡಿ ಅಂತಾ ಜನರು ಯಾರೂ ಕೇಳಿರಲಿಲ್ಲ. ಈಗಾಗಲೇ ಟೊಮೆಟೊ ಬೆಲೆ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ
ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಬರೆ ಎಳೆಯಲು ಮುಂದಾಗಿದ್ದು, ಹಾಲಿನ ದರ ಏರಿಕೆ ಮಾಡಲು ಹೊರಟಿದೆ. ಸರ್ಕಾರ 5 ಗ್ಯಾರಂಟಿಗಳನ್ನು ಕೊಟ್ಟು, ಎರಡು ಕೈಗಳಿಂದ ಕಿತ್ತುಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.