alex Certify ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ

ಹಾಸನ: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕೇವಲ ಊಹಾಪೋಹವಷ್ಟೇ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ‌.

ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 5 ವರ್ಷ ಅವಧಿ ಪೂರ್ಣಗೊಳಿಸಲಿದ್ದು, ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಿಎಂ ಆಗಲಿದ್ದಾರೆ ಎಂದು ಕೆಲವು ಶಾಸಕರು ಹೇಳುತ್ತಾರೆ. ಇಂತಹ ಗೊಂದಲಗಳು ಸಹಜ. ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎನ್ನುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿಯಲ್ಲ. ಪಕ್ಷದ ವರಿಷ್ಠರು ಇನ್ನೂ ತೀರ್ಮಾನಿಸಿಲ್ಲ, ಅವರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...